|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
೧೯೯೧ರಲ್ಲಿ ತಮಿಳುನಾಡಿನ ಪುದುಕೊಟ್ಟೈನಲ್ಲಿ ಒಂದು ಅಸಾಧಾರಣ ಮತ್ತು ಅಭೂತಪೂರ್ವ ಪ್ರಯೋಗವೊಂದು ನಡೆಯಿತು. ರಾಷ್ಟ್ರೀಯ ಸಾಕ್ಷರತಾ ಮಿಷನ್ ನ ಫಲವಾಗಿ ಒಂದು ಲಕ್ಷಕ್ಕೂ ಹೆಚ್ಚು ಅನಕ್ಷರಸ್ಥ ಗ್ರಾಮೀಣ ಮಹಿಳೆಯರು ಓದು ಬರೆಹ ಕಲಿತದ್ದು ಮಾತ್ರವಲ್ಲ ಸೈಕಲ್ ಸವಾರಿಯನ್ನೂ ಕಲಿತರು. ಜಗತ್ತಿನ ಯಾವ ಭಾಗದಲ್ಲೂ ಮಹಿಳೆಯರಿಗೆ ಈ ಪ್ರಮಾಣದಲ್ಲಿ ಸ್ವಾತಂತ್ರ್ಯ ಮತ್ತು ಓಡಾಡುವ ಸಾಮರ್ಥ್ಯ ದೊರಕಿದ್ದೇ ಇಲ್ಲ. ಈ ಸ್ಫೂರ್ತಿದಾಯಕ ಘಟನೆಯನ್ನು ಅತ್ಯಾಕರ್ಷಕ ರೇಖಾಚಿತ್ರಕಥೆಯ ರೂಪದಲ್ಲಿ ಇಲ್ಲಿ ಸೆರೆಡಿಯಲಾಗಿದೆ. ಮಹಿಳಾ ಸ್ವಾವಲಂಬನೆ ಮತ್ತು ಸಬಲೀಕರಣಕ್ಕೆ ಈ ಕೃತಿ ಒಂದು ಅಪೂರ್ವ ಕೊಡುಗೆ.
|
ಅರವಿಂದ ಗುಪ್ತ ಕಾನ್ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆಯಿಂದ ಎಲೆಕ್ಟ್ರಿಕ್ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದಾರೆ (1975). ವಿಜ್ಞಾನ ಚಟುವಟಿಕೆಗಳ ಕುರಿತು ೧೫ ಕೃತಿಗಳನ್ನು ರಚಿಸಿದ್ದಾರೆ. ಹಿಂದಿಯಲ್ಲಿ ಅವರ 140 ಕೃತಿಗಳು ಹೊರಬಂದಿವೆ. ದೂರದರ್ಶನಕ್ಕಾಗಿ ವಿಜ್ಞಾನ ಕುರಿತು 125 ಚಿತ್ರಗಳನ್ನು ನಿರ್ಮಿಸಿದ್ದಾರೆ. ಅವರ ಮೊದಲ ಪುಸ್ತಕ ‘ಮ್ಯಾಚ್ಸ್ಟಿಕ್ ಮಾಡೆಲ್ಸ್ ಅಂಡ್ ಅದರ್ ಸೈನ್ಸ್ ಎಕ್ಸ್ಪೆರಿಮೆಂಟ್ಸ್’ ಭಾರತದ 12 ಭಾಷೆಗಳಿಗೆ ಅನುವಾದವಾಗಿದೆ; 5 ಲಕ್ಷ ಪ್ರತಿಗಳು ಮಾರಾಟವಾಗಿವೆ. ಮಕ್ಕಳಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸಲು ಸ್ಥಾಪಿಸಿರುವ ರಾಷ್ಟ್ರೀಯ ಪ್ರಶಸ್ತಿಗೆ ಮೊದಲು ಭಾಜನರಾದವರು ಇವರು (1988). ಐ.ಐ.ಟಿ. ಕಾನ್ಪುರದ ಹಳೆಯ ವಿದ್ಯಾರ್ಥಿಗಳ ವಿಶೇಷ ಪ್ರಶಸ್ತಿ (2000), ಇಂದಿರಾಗಾಂಧಿ ಜನಪ್ರಿಯ ವಿಜ್ಞಾನ ಪ್ರಶಸ್ತಿ (2008), ಮಕ್ಕಳಲ್ಲಿ ವಿಜ್ಞಾನಾಸಕ್ತಿ ಮೂಡಿಸಲು ಸ್ಥಾಪಿಸಿದ ‘ಥರ್ಡ್ ವರ್ಲ್ಡ್ ಅಕಾಡೆಮಿ ಆಫ್ ಸೈನ್ಸ್ ಪ್ರಶಸ್ತಿ’ (2010), ಇವರಿಗೆ ಬಂದಿರುವ ಪ್ರಶಸ್ತಿಗಳಲ್ಲಿ ಕೆಲವು. ಸದ್ಯ ಅವರು ಪುಣೆಯ I.U.C.A.A. ಮಕ್ಕಳ ವಿಜ್ಞಾನ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ತಮ್ಮ ಅಂತರಜಾಲದಲ್ಲಿ http://arvindguptatoys.com ಮೂಲಕ ಪುಸ್ತಕ ಮತ್ತು ಗೊಂಬೆಗಳ ಕುರಿತು ತಮ್ಮ ಆಸಕ್ತಿಯನ್ನು ಹಂಚಿಕೊಳ್ಳುತ್ತಿದ್ದಾರೆ.
|
|
| | |
|
|
|
|
|
|
|
|