|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |  | ಉತ್ತಮ ಅನುವಾದಕ್ಕಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ 1998
ಭಾರತೀಯ ಪ್ರಕಾಶಕರ ಒಕ್ಕೂಟದ ‘ಅತ್ಯುತ್ತಮ ಮುದ್ರಣ ವಿನ್ಯಾಸ ಪ್ರಶಸ್ತಿ’ 1998 |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಒಂದು ದೇಶದ ಇತಿಹಾಸವೆಂದರೆ, ಆ ದೇಶವನ್ನು ಆಳಿದ ರಾಜವಂಶಗಳ, ಅವು ನಡೆಸಿದ ದಂಡಯಾತ್ರೆಗಳ, ಸಣ್ಣಪುಟ್ಟ ಯುದ್ಧಗಳ ಅಥವಾ ಅವುಗಳ ಸೋಲು-ಗೆಲುವು, ಅಳಿವು-ಉಳಿವುಗಳ ವರದಿಯಷ್ಟೇ ಅಲ್ಲ. ಇತಿಹಾಸವೆಂದರೆ ಸರಿಯಾದ ಆಧಾರವಿಲ್ಲದ ಕಾಲ್ಪನಿಕ ಭವ್ಯ ಚಿತ್ರಣವೂ ಅಲ್ಲ. ಇತಿಹಾಸದ ಅವಧಿಯಲ್ಲಿ ಅಲ್ಲಿ ಬದುಕಿದ ಜನರ ಜೀವನ, ಅಲ್ಲಿನ ಆರ್ಥಿಕ ಪರಿಸ್ಥಿತಿ, ಪರದೇಶಗಳೊಂದಿಗಿನ ವಾಣಿಜ್ಯ-ಆರ್ಥಿಕ ಸಂಬಂಧಗಳು, ನಾನಾ ಕಾರಣಗಳಿಂದ ವಲಸೆ ಬಂದು ಅಲ್ಲಿ ನೆಲಸಿದ ಇತರ ಜನರು, ಅಲ್ಲಿ ಹುಟ್ಟಿದ ಮತ ಧಾರ್ಮಿಕ ಚಳವಳಿಗಳು ಹಾಗೂ ಪಂಥಗಳು ಇತಿಹಾಸವನ್ನು ರೂಪಿಸುವುದರಲ್ಲಿ ಮುಖ್ಯ ಪಾತ್ರವಹಿಸುತ್ತವೆ ಎಂಬುದನ್ನು ಮರೆಯಬಾರದು.
ಇತಿಹಾಸ ಬೆಸೆದ ಕೊಂಡಿಗಳ ಮೂಲಕ ಇಂದಿನ ಆಗುಹೋಗುಗಳನ್ನು ಅರ್ಥ ಮಾಡಿಕೊಳ್ಳುವುದಕ್ಕೆ ಅಂತೆಯೇ ಭವಿಷಯವನ್ನು ರೂಪಿಸುವುದಕ್ಕೆ, ಇತಿಹಾಸದ ವಸ್ತುನಿಷ್ಠ ಅಧ್ಯಯನ ನೆರವಾಗುತ್ತದೆ.
|
| | |
|
|
|
|
|
|
|
|