Items
0
Total
  0.00 
Welcome Guest.
Kindly Excuse if any delay and delivery issues by Courier due to Lock down

 
Rs. 110    
10%
Rs. 99/-
 
 
Dispatched within 7 Business Days
FREE Home Delivery
(For purchase of Rs 399/- and above)

    
  • ವಿವರಗಳು
  • ಪುಸ್ತಕದ ಬಗ್ಗೆ
  • ಲೇಖಕರ ಬಗ್ಗೆ
ಪ್ರಕಾಶಕರು : ಅಕ್ಷರ ಪ್ರಕಾಶನ, Akshara Prakashana
ಈಗಿನ ಮುದ್ರಣದ ಸಂಖ್ಯೆ : 14
ಮುದ್ರಣದ ವರ್ಷ : 2013
ರಕ್ಷಾ ಪುಟ : ಸಾದಾ
ಪುಟಗಳು : 108
ಪುಸ್ತಕದ ಗಾತ್ರ : 1/8 Demy Size
ಕೋಡ್ : 106363

‘ಸಂಸ್ಕಾರ‘ ಕನ್ನಡ ನವ್ಯ ಸಾಹಿತ್ಯದ ಅಪೂರ್ವ ಸಿದ್ಧಿಗಳಲ್ಲೊಂದಾಗಿದೆ. ನವ್ಯ ಸಾಹಿತ್ಯದ ಕೆಲವು ಮೂಲಭೂತ ಪ್ರವೃತ್ತಿಗಲ ಸಮರ್ಥ ಆವಿಷ್ಕಾರ ಇದರಲ್ಲಿದೆ. ಹಳೆಯ ಸಂಸ್ಕಾರಗಳನ್ನು ಓರೆಗೆ ಹಚ್ಚಿ ನೋಡಿ, ಸತ್ವಹೀನವಾದವುಗಳನ್ನು ಕಳಚಿ ಒಗೆದು, ದ್ವಂದ್ವಕ್ಕೆ ಘರ್ಷಣೆಗೆ ದುಃಖಕ್ಕೆ ಅಳುಕದೆ, ಧೈರ್ಯದಿಂದ ಪ್ರಾಮಾಣಿಕತೆಯಿಂದ ಹೊಸ ಮೌಲ್ಯಗಳನ್ನು ಅನ್ವೇಷಿಸುವ ಪ್ರವೃತ್ತಿ ನವ್ಯಪ್ರಜ್ಞೆಯ ಮೂಲಸ್ವರೂಪವೆಂದು ಪರಿಗಣಿಸಬಹುದಾದರೆ, ಅದು ‘ಸಂಸ್ಕಾರ‘ದ ವಸ್ತುವಿನಲ್ಲಿಯೂ, ನಾಯಕ ಪ್ರಾಣೇಶಾಚಾರ್ಯರ ಚರಿತ್ರೆಯಲ್ಲಿಯೂ, ಕತೆ ಹೇಳುವ ರೀತಿಯಲ್ಲಿಯೂ, ಭಾಷೆಯಲ್ಲಿಯೂ ಮೊದಲಿನಿಂದ ಕೊನೆಯವರೆಗೆ ಪರಿಣಾಮಕಾರಿಯಾಗಿ ಅಭಿನಯಿಸಲ್ಪಟ್ಟಿದೆ. ‘ಸಂಸ್ಕಾರ‘ದ ಒಟ್ಟಂದದ ಸಿದ್ಧಿಯನ್ನು ನೋಡಿದಾಗ, ಭಾರತೀಯ ಸಾಹಿತ್ಯರಂಗದಲ್ಲಿ ಕನ್ನಡದ ಪ್ರತಿನಿಧಿಯಾಗಿ ಬೆಳಗಬಲ್ಲ ಕೆಲವೇ ಕೃತಿಗಳಲ್ಲಿ ‘ಸಂಸ್ಕಾರ‘ ಒಂದಾಗಿದೆ ಎಂದು ಖಚಿತವಾಗಿ ಹೇಳಬಹುದು.

ಯು.ಆರ್. ಅನಂತಮೂರ್ತಿಯವರು ಹುಟ್ಟಿದ್ದು ೧೯೩೨ರಲ್ಲಿ, ಶಿವಮೊಗ್ಗ ಜಿಲ್ಲೆಯ ಮೇಳಿಗೆಯಲ್ಲಿ. ೧೯೫೬ರಲ್ಲಿ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ. ಎ. ಪದವಿ ಪಡೆದರು; ೧೯೬೩ರಲ್ಲಿ ಕಾಮನ್ವೆಲ್ತ್ ಫೆಲೊಶಿಪ್ ಪಡೆದು ಇಂಗ್ಲೆಂಡಿಗೆ ಹೋಗಿ ಬರ್ಮಿಂಗಂ ವಿಶ್ವವಿದ್ಯಾಲಯದಿಂದ ಪಿ.ಎಚ್ಡಿ ಗಳಿಸಿದರು; ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ, ಮೈಸೂರಿನ ರೀಜನಲ್ ಕಾಲೇಜಿನಲ್ಲಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ, ರೀಡರ್ ಆಗಿ, ಪ್ರಾಧ್ಯಾಪಕರಾಗಿ ಸೇವೆಸಲ್ಲಿಸಿದರು; ಅಮೆರಿಕದ ಅಯೋವಾ ವಿಶ್ವವಿದ್ಯಾಲಯದಲ್ಲಿ, ಟಫ್ಟ್ಸ್ ವಿಶ್ವವಿದ್ಯಾಲಯದಲ್ಲಿ, ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿ, ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಲ್ಲಿ, ಕಾರ್ನೆಗಿ ವಿಶ್ವವಿದ್ಯಾಲಯದಲ್ಲಿ, ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ, ಫುಲ್ಬ್ರೈಟ್ ಪ್ರೊಫೆಸರ್ ಆಗಿ ಬೋಧಿಸಿದರು; ಕೊಟ್ಟಾಯಂನ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದ ಕುಲಪತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ, ನ್ಯಾಷನಲ್ ಬುಕ್ ಟ್ರಸ್ಟ್ ಅಧ್ಯಕ್ಷ, ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ನ ನಿರ್ದೇಶಕ, ಹೀಗೆ ಹಲವು ಹುದ್ದೆಗಳನ್ನು ನಿರ್ವಹಿಸಿದರು. ಸಂಸ್ಕಾರ ಅನಂತಮೂರ್ತಿಯವರ ಮೊದಲ ಕಾದಂಬರಿ. ಇದು ಭಾರತದ ಭಾಷೆಗಳಿಗಲ್ಲದೆ, ಯೂರೋಪಿನ ಹಾಗೂ ಏಷ್ಯದ ಹಲವು ಭಾಷೆಗಳಿಗೆ ಭಾಷಾಂತರಗೊಂಡಿದೆ; ಚಲನಚಿತ್ರವಾಗಿಯೂ ಪ್ರಸಿದ್ಧವಾಗಿದೆ. ಎಂದೆಂದೂ ಮುಗಿಯದ ಕಥೆ, ಪ್ರಶ್ನೆ, ಮೌನಿ, ಆಕಾಶ ಮತ್ತು ಬೆಕ್ಕು, ಸೂರ್ಯನ ಕುದುರೆ, ಪಚ್ಚೆ ರಿಸಾರ್ಟ್ ಅವರ ಮುಖ್ಯ ಕಥಾ ಸಂಕಲನಗಳು. ಹದಿನೈದು ಪದ್ಯಗಳು, ಅಜ್ಜನ ಹೆಗಲ ಸುಕ್ಕುಗಳು, ಮಿಥುನ, ಶತಮಾನದ ಕವಿ ಯೇಟ್ಸ್, ಶತಮಾನದ ಕವಿ ರಿಲ್ಕೆ ಅವರ ಕವನ ಸಂಕಲನಗಳು. ಭಾರತೀಪುರ, ಅವಸ್ಥೆ, ಭವ, ದಿವ್ಯ ಅವರ ಇತರ ಕಾದಂಬರಿಗಳು. ಪ್ರಜ್ಞೆ ಮತ್ತು ಪರಿಸರ, ಸನ್ನಿವೇಶ, ಸಮಕ್ಷಮ, ಪೂರ್ವಾಪರ, ಬೆತ್ತಲೆ ಸೇವೆ ಯಾಕೆ ಕೂಡದು?, ಯುಗಪಲ್ಲಟ, ನವ್ಯಾಲೋಕ, ವಾಲ್ಮೀಕಿಯ ನೆವದಲ್ಲಿ, ಆಚೀಚೆ, ಮಾತು ಸೋತ ಭಾರತ, ಕಾಲಮಾನ ಮೊದಲಾದ ವಿಮರ್ಶಾತ್ಮಕ ಚಿಂತನಪರ ಪ್ರಬಂಧ ಸಂಕಲನಗಳು ಪ್ರಕಟವಾಗಿವೆ. ಅನಂತಮೂರ್ತಿಯವರು ಪಡೆದಿರುವ ಪ್ರಶಸ್ತಿ ಪುರಸ್ಕಾರಗಳಲ್ಲಿ ಹಲವು ವಿಶ್ವವಿದ್ಯಾಲಯಗಳ ಗೌರವ ಡಿ.ಲಿಟ್, ಹೋಮಿಬಾಬಾ ಫೆಲೊಶಿಪ್, ಮಾಸ್ತಿ ಪ್ರಶಸ್ತಿ, ಭಾರತೀಯ ಜ್ಞಾನಪೀಠ ಪ್ರಶಸ್ತಿ, ಭಾರತ ಸರ್ಕಾರ ನೀಡುವ ಪದ್ಮಭೂಷಣ ಪ್ರಶಸ್ತಿ ಮುಖ್ಯವಾದುವು. ೨೦೦೨ರಲ್ಲಿ ಅವರು ತುಮಕೂರಿನಲ್ಲಿ ನಡೆದ ೬೯ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

uploads/authorimages/616.jpg
ಲೇಖಕರ ಇತರ ಕೃತಿಗಳು
10%
ಇಲ್ಲಿಯವರೆಗಿನ ಕವಿತೆಗಳು
ಅನಂತಮೂರ್ತಿ ಯು ಆರ್, Ananthamurthy U R
Rs. 120    Rs. 108
10%
ಎಂದೆಂದೂ ಮುಗಿಯದ ಕಥೆ ....
ಅನಂತಮೂರ್ತಿ ಯು ಆರ್, Ananthamurthy U R
Rs. 60    Rs. 54
10%
ನಿಜದ ಬೆಳಕಿನೆಡೆಗೆ ಒಂದು ....
ಅನಂತಮೂರ್ತಿ ಯು ಆರ್, Ananthamurthy U R
Rs. 75    Rs. 68
10%
ಕನ್ನಡ ಕಾವ್ಯ ಸಂಗ್ರಹ
ಅನಂತಮೂರ್ತಿ ಯು ಆರ್, Ananthamurthy U R
Rs. 55    Rs. 50
Best Sellers
ಬಾವಿಕಟ್ಟೆಯ ಬಳಿ (ವಿಶ್ವ ಕಥಾ ಕೋಶ ಮಾಲಿಕೆ)
ನಿರಂಜನ, Niranjana
Rs. 68/-   Rs. 75
250 ವಿವಿಧ ಬಗೆಯ ಸಂಜೆಯ ತಿಂಡಿ ತಿನಿಸುಗಳು (ಭಾಗ-2) (ಅಡಿಗೆ ಪುಸ್ತಕ)
ವಾಣಿ ರವಿಶಂಕರ್, Vani Ravishankar
Rs. 108/-   Rs. 120
ಕನ್ನಡ ವ್ಯಾಕರಣ ಪ್ರವೇಶ
ಗೋಪಾಲ್ ಟಿ ಎಸ್, Gopal T S
Rs. 135/-   Rs. 150
ಭಾರತ ದರ್ಶನ
ವಿದ್ಯಾನಂದ ಶೆಣೈ ಬಿ ವಿ, Vidyananda Shenoy
Rs. 140/-   Rs. 155

Latest Books
ಕನ್ನಡ ಬರಹದ ಸೊಲ್ಲರಿಮೆ - ೬ (ಇದು ಕನ್ನಡದ್ದೇ ವ್ಯಾಕರಣ)
ಶಂಕರ ಭಟ್ ಡಿ ಎನ್, Shankar Bhat D N
Rs. 270/-   Rs. 300
ಯುಟರ್ನ್ : ಯಶಸ್ಸಿಗೊಂದು ಮಹತ್ವದ ತಿರುವು
ಶಿವಕುಮಾರ್ ಡಿ, Shivakumar D
Rs. 179/-   Rs. 199
ತಾಯಿ ಬೇರು : ಪ್ರಕಟಿತ ಅಂಕಣ ಬರಹಗಳ ಸಂಕಲನ
ವಿಲ್ಫ್ರೆಡ್ ಡಿಸೋಜಾ, Wilfred DSouza
Rs. 135/-   Rs. 150
ಬಾಳಿಗೊಂದು ಉತ್ತರ
ಮಾಲಿನಿ ಮಲ್ಯ, Malini Mallya
Rs. 203/-   Rs. 225


 
 
 
Newsletter Signup



Email
City

Copyright © 2011-2019. Navakarnataka Publications Private Limited., Bangalore. Developed & Maintained by
Dhruva Consulting, Bangalore.