|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಕಯ್ಯೂರು ಹೋರಾಟಕ್ಕೆ ಸಂಬಂಧಿಸಿದಂತೆ 60 ಜನರನ್ನು ಬಂಧಿಸಿ ಮಂಗಳೂರಿಗೆ ತಂದಿದ್ದರು ವಿಚಾರಣೆಗಾಗಿ.... ಸೆರೆಮನೆಯಲ್ಲಿ ಆ ಕೈದಿಗಳನ್ನು ಭೇಟಿಯಾದೆ. ದೀರ್ಘ ವಿಚಾರಣೆಯ ವೇಳೆ ವರದಿಗಾರನಾಗಿ ಪ್ರತಿ ದಿನವೂ ಅವರು ಸಾಮೀಪ್ಯದ ಸವಿಯುಂಡೆ. ಆ ವಿಚಾರಣೆ ಭಾರೀ ನಾಟಕ. ಅದರ ಭೀಕರತೆ ಸ್ಪಷ್ಟವಾದದ್ದು ನ್ಯಾಯಮೂರ್ತಿ ತೀರ್ಪು ನೀಡಿದ ದಿನ. ನಾಲ್ವರಿಗೆ ಮರಣದಂಡನೆ. ನಾನು ನೋಡನೋಡುತ್ತಿದ್ದಂತೆಯೇ ಕಯ್ಯೂರಿನ ಶೋಷಿತರು ಇತಿಹಾಸ ರಚಿಸಿದ್ದರು, ಕಥೆಯಾಗಿದ್ದರು, ದಂತಕಥೆಯಾಗಿದ್ದರು.
‘ಚಿರಸ್ಮರಣೆ’ ಒಂದು ಕಾದಂಬರಿ, ಚರಿತ್ರೆಯಲ್ಲ, ಈ ಕೃತಿಯಲ್ಲಿ ನಾನು ಮಾಡಿರುವುದು, ಕಯ್ಯೂರಿನ ಹೋರಾಟದ ಅಂತಸ್ಸತ್ವವನ್ನು ಆ ಕಾಲಾವಧಿಯ ಚೇತನವನ್ನು-ಕಲೆಯಲ್ಲಿ ಸೆರೆಹಿಡಿಯುವ ಯತ್ನ. ‘ಚಿರಸ್ಮರಣೆ’ಯ ಅನೇಕ ಪಾತ್ರಗಳು ನಿಜಜೀವನದಿಂದಲೇ ಕಾದಂಬರಿಯ ಪುಟಗಳಿಗೆ ನಡೆದುಬಂದಿದೆ. ಆದರೆ ಇಲ್ಲಿನ ಪಾತ್ರ ನಿರ್ವಹಣೆಗಾಗಿ ರಂಗ ಸಜ್ಜಿಕೆಯ ವೇಷಭೂಷಣಗಳನ್ನು ಅವು ನಿರಾಕರಿಸಿಲ್ಲ. ಇನ್ನು ಕೆಲ ಪಾತ್ರಗಳನ್ನು ನಾನು ಕಡೆದದ್ದು ನನ್ನ ಕಲ್ಪನೆಯ ಮೂಸೆಯಲ್ಲಿ
- ನಿರಂಜನ
|
| |
|
|
|
|
|
|
|
|
|