|
|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ರಾಷ್ಟ್ರಕವಿ ಡಾ|| ಜಿ. ಎಸ್. ಶಿವರುದ್ರಪ್ಪನವರು ತಮ್ಮ ಕಾವ್ಯಾರ್ಥ ಚಿಂತನ ಕೃತಿಗೆ ೧೯೮೪ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಪುರಸ್ಕಾರವನ್ನು ಪಡೆದುಕೊಂಡಿರುವವರು. ಧೀಮಂತ ಸಾಹಿತಿ, ಕವಿಯಾಗಿ, ವಿಮರ್ಶಕರಾಗಿ, ಸ್ವೋಪಜ್ಞ ಚಿಂತಕರಾಗಿ, ಶ್ರೇಷ್ಠ ಪ್ರಾಧ್ಯಾಪಕರಾಗಿ, ಸಮರ್ಥ ಆಡಳಿತಗಾರರಾಗಿ, ವಿಶಿಷ್ಟ ಯೋಜಕರಾಗಿ ಅವರು ತಮ್ಮ ಛಾಪನ್ನು ಮೂಡಿಸಿದ್ದಾರೆ. ವಿದೇಶಗಳಲ್ಲಿ ಪ್ರವಾಸ ಮಾಡಿರುವ ಜಿ. ಎಸ್. ಎಸ್. ಅವರು ಮಾಸ್ಕೋ ಪ್ರವಾಸವನ್ನು ಕುರಿತು ಬರೆದಿರುವ ಮಾಸ್ಕೋದಲ್ಲಿ ಇಪ್ಪತ್ತೆರಡು ದಿನ ಪ್ರವಾಸ ಕಥನಕ್ಕೆ ಸೋವಿಯೆಟ್ ಲ್ಯಾಂಡ್ ನೆಹರೂ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ. ರಾಷ್ಟ್ರೀಯ ಉಪನ್ಯಾಸಕರಾಗಿ ವಿಶ್ವವಿದ್ಯಾನಿಲಯ ಧನ ಸಹಾಯ, ಆಯೋಗದ ಮಾನ್ಯತೆಯನ್ನು ಪಡೆದಿದ್ದ ಅವರು ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕಾವ್ಯ ಪೀಠದ ಸಂದರ್ಶಕ ಪ್ರಾಧ್ಯಾಪಕತ್ವದ ಗೌರವಕ್ಕೂ ಪಾತ್ರರಾಗಿದ್ದಾರೆ. ಕುವೆಂಪು ಅವರ ಅನಂತರದಲ್ಲಿ ಕರ್ನಾಟಕ ಸರ್ಕಾರದ ರಾಷ್ಟ್ರಕವಿ ಪ್ರಶಸ್ತಿಗೂ ಅವರು ಪಾತ್ರರಾಗಿದ್ದಾರೆ. ಹೀಗಾಗಿ, ಶಿವರುದ್ರಪ್ಪನವರು ನಾಡಿನ ಹೆಮ್ಮೆಯ ಸಾಹಿತಿಯೇ ಆಗಿದ್ದಾರೆ.
|
| |
|
|
|
|
|
|
|
|
|