|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಹಾಣಾದಿ- ಕಪಿಲ ಪಿ ಹುಮನಾಬಾದೆ ಅವರ ಮೊದಲ ಕಾದಂಬರಿ. ಕನ್ನಡ ಪುಸ್ತಕ ಪ್ರಾಧಿಕಾರದ ಯುವ ಬರಹಗಾರರ ಚೊಚ್ಚಲ ಕೃತಿ ಪ್ರೋತ್ಸಾಹಧನಕ್ಕೆ ಆಯ್ಕೆಯಾಗಿರುವ ಈ ಕೃತಿ ಹಲವು ಕಾರಣಗಳಿಂದ ಗಮನ ಸೆಳೆಯುತ್ತದೆ. ವರ್ತಮಾನ ಮತ್ತು ಭೂತಕಾಲದ ಜತೆಜತೆಗೆ ಸಾಗುವ, ನೆನಪುಗಳ ಸಿಕ್ಕುಗಳಲ್ಲಿ ಓದುಗನನ್ನು ಸಿಲುಕಿಸುವ ಕಾದಂಬರಿ ವಾಸ್ತವತೆಯ ತಂತ್ರವನ್ನು ಬಳಸುತ್ತದೆ. ಕಥೆಯೊಳಗೆ ಕಥೆ, ಅದರೊಳಗಿನ್ನೊಂದು ಕಥೆ ಎಂಬಂತೆ ಇದರ ನಿರೂಪಣೆ. ಕಾದಂಬರಿಯಲ್ಲಿ ಜನಪದ ರಮ್ಯಾದ್ಬುತ ಕಥೆಗಳಲ್ಲಿರುವಂತೆ ಗುಬ್ಬಿ ಆಯಿ ಎಂಬ ಆಡಗೊಳಜ್ಜಿ ಒಬ್ಬಳಿದ್ದಾಳೆ. ಬೇತಾಳವನ್ನು ಬೆನ್ನಿಗೆ ಹಾಕಿಕೊಂಡಿರುವ ರಾಜಾ ತ್ರಿವಿಕ್ರಮನಂತೆ ನೆನಪುಗಳ ಪಾಥೆಯವನ್ನು ಹೊತ್ತ ಕಥಾನಿರೂಪಕನಿದ್ದಾನೆ. ಅವರ ಮಾತುಕತೆ, ನೆನಪು, ಉಪಕಥೆಗಳು ಭ್ರಮ-ವಿಭ್ರಮ ಲೋಕವನ್ನು ಸೃಷ್ಟಿಸುತ್ತವೆ. ಒಂದು ಗ್ರಾಮದ ಅವನತಿ, ಸಾವು-ನೋವು, ವಿಷಮ ಸಂಸಾರ, ಸಂಬಂಧಗಳು, ಮಾನವ ಸಹಜ ದ್ವೇಷಾಸೂಯೆ ಬದುಕು ಬಲಿ ಕೊಡುವ ನಂಬಿಕೆ ಇತ್ಯಾದಿಗಳು ಈ ಗಾರುಡಿ ಲೋಕದಲ್ಲಿ ಬಿಚ್ಚಿಕೊಳ್ಳುತ್ತವೆ
|
ಯುವ ಬರಹಗಾರ ಕಪಿಲ ಪಿ ಹುಮನಾಬಾದೆ ಅವರು ಮೂಲತಃ ಬೀದರ್ ನವರು. ಬೀದರನಿಂದ ನೌಬಾದ ಹಾದಿ ಹಿಡಿದು, ಎರಡು ಬೋಳು ಗುಡ್ಡವಿಳಿದು ಹೋದರೆ ಅಲ್ಲಿ ಕಾಣುವ ಅಲಿಯಾಬಾದ್ ಎಂಬ ಪುಟ್ಟ ಗ್ರಾಮದಲ್ಲಿ 1996 ಜನವರಿ 25ರಂದು ಜನಿಸಿದರು. ಪ್ರಭು ವೀರಶೆಟ್ಟಿಯವರ ಮೊದಲ ಮಗ ಕಪಿಲ ಪಿ ಹುಮನಾಬಾದೆ. 2019 ನೇ ಸಾಲಿನ ವಿಜಯಕರ್ನಾಟಕ ಯುಗಾದಿ ಕಥಾಸ್ಪರ್ಧೆಯ ಟಾಪ್ 25 ಕಥೆಗಳಲ್ಲಿ ಇವರ ಬಾಗಿಲು ಎಂಬ ಸಣ್ಣಕಥೆ ಆಯ್ಕೆಯಾಗಿದೆ. ಸದ್ಯ ಕಾವ್ಯಮನೆ ಪ್ರಕಾಶನ ಬಳ್ಳಾರಿ, ಮುಖ್ಯ ಸಂಚಾಲಕರಾಗಿ ಕಾರ್ಯ ನಿರ್ವೈಸುತ್ತಿದ್ದಾರೆ. ಈಗ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಎಂ.ಎ ಎರಡನೇ ವರ್ಷದ ವಿದ್ಯಾರ್ಥಿ. ಹಾಣಾದಿ ಇವರ ಮೊದಲ ಕಾದಂಬರಿ. ಇದು ಕನ್ನಡ ಪುಸ್ತಕ ಪ್ರಾಧಿಕಾರದ ಯುವ ಬರಹಗಾರರ ಚೊಚ್ಚಲ ಕೃತಿ ಪ್ರೋತ್ಸಾಹಧನಕ್ಕೆ ಆಯ್ಕೆಯಾಗಿದೆ.
|
|
| |
|
|
|
|
|
|
|
|