|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ವೈಜ್ಞಾನಿಕ ಸಾಧನಗಳನ್ನು ಬಳಸಿ ಹುಲಿಯಂತಹ ಅದ್ಭುತಜೀವಿಯ ಉಳಿವಿಗಾಗಿ ಶ್ರಮಿಸಿದವರಲ್ಲಿ ಕೆ.ಉಲ್ಲಾಸ ಕಾರಂತರಂಥವರು ಭಾರತದಲ್ಲೇ ಏಕೆ, ಇಡೀ ಜಗತ್ತಿನಲ್ಲೇ ಮತ್ತೊಬ್ಬರಿಲ್ಲ. ಹುಲಿಗಳ ಬದುಕಿನ ಬಗೆಗೆ ಇಪ್ಪತ್ತು ವರ್ಷಗಳಿಗೂ ಹೆಚ್ಚು ಕಾಲ ತತ್ಪರತೆಯಿಂದ ಅಧ್ಯಯನ ಮಾಡಿದ ಉಲ್ಲಾಸ ಕಾರಂತರು ಭಾರತದ ಅತಿಕುಶಲ ಕ್ಷೇತ್ರ ಜೀವಶಾಸ್ತ್ರಜ್ಞರಾಗಿಯೂ ಹುಲಿಯ ಉಳಿವಿಗಾಗಿ ನಿರಂತರವಾಗಿ ಶ್ರಮಿಸಿ ಯಶ ಕಂಡ ಸಂರಕ್ಷಣಾವಾದಿಯಾಗಿಯೂ ವಿಶ್ವದ ಗಮನ ಸೆಳೆದಿದ್ದಾರೆ. ಅವರ ವೈಜ್ಞಾನಿಕ ಕಾರ್ಯಕುಶಲತೆ, ಸಂರಕ್ಷಣಾವಾದಿಯಾಗಿ ಕಾರಂತರ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ. ಹುಲಿ ಮತ್ತು ಬಲಿಪ್ರಾಣಿಗಳ ಗಣತಿಗಾಗಿ ವಿಶ್ವಸನೀಯ ತಂತ್ರಗಳನ್ನು ಅಭಿವೃದ್ಧಿಪಡಿಸಿರುವ ಕಾರಂತರು, ಇವೆರಡರ ಸಂಖ್ಯೆಗಳ ನಡುವೆ ಇರುವ ಸಂಬಂಧವನ್ನು ಸ್ಪಷ್ಟಪಡಿಸಿದ್ದಾರೆ. ವಿಮರ್ಶೆ: ಹುಲಿ - ಚಿರತೆಗಳಂಥ ಮಾರ್ಜಾಲಗಳಿಗೆ ರೇಡಿಯೋ ಕಾಲರ್ ತೊಡಿಸಿ ಅವುಗಳ ಚಲನ ವಲನ, ಅವುಗಳ ಸಂಖ್ಯೆಯಲ್ಲಾಗುವ ಏರಿಳಿತ ಇವುಗಳ ಮೇಲೆ ಪಾಳತಿ ಇಡುವುದೇ ಉಲ್ಲಾಸ ಕಾರಂತರ ಗುರಿ.
|
| |
|
|
|
|
|
|
|
|
|