|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸುಮಾರು 46 ವರ್ಷಗಳ ಕಾಲ ಮೈಸೂರನ್ನು ಆಳಿದ ಒಡೆಯರ್ ವಂಶದ 24ನೆಯ ಅರಸರಾಗಿದ್ದರು. ನಾಲ್ವಡಿಯವರಿಗೆ ಕನ್ನಡ, ಸಂಸ್ಕೃತ, ಉರ್ದು ಹಾಗೂ ಇಂಗ್ಲಿಷ್ ಭಾಷೆಗಳ ಮೇಲೆ ಅಸಾಧಾರನ ಪಾಂಡಿತ್ಯವಿತ್ತು. ಭಾರತೀಯ ಹಾಗೂ ಪಾಶ್ಚಾತ್ಯ ಸಂಗೀತವನ್ನು ಅರಿತಿದ್ದರು. ಎಂಟು ವಾದ್ಯಗಳನ್ನು ನುಡಿಸಬಲ್ಲವರಾಗಿದ್ದರು. ಬಾಂಬೆ ಸಿವಿಲ್ ಸರ್ವೀಸಿಗೆ ಸೇರಿದ್ದ ಸರ್ ಸ್ಟುವರ್ಟ್ ಫ್ರೇಸರ್ ಅವರು ಅತ್ಯುತ್ತಮ ಮಾರ್ಗದರ್ಶಕರಾದರು. ಕಾಥೇವಾಡ ಸಂಸ್ಥಾನದ ಕಿರಿಯ ರಾಜಕುಮಾರಿ ಮಹಾರಾಣಿ ಲಕ್ಷ್ಮೀವಿಲಾಸ ಸನ್ನಿಧಾನ ಶ್ರೀ ಪ್ರತಾಪಕುಮಾರಿ ಅಮ್ಮಣ್ಣಿಯವರನ್ನು ಮದುವೆಯಾದರು.
ಏಷ್ಯದಲ್ಲಿಯೇ ಮೊದಲ ಶಿವನಸಮುದ್ರ ಜಲವಿದ್ಯುದಾಗರ, ಕೃಷ್ಣರಾಜಸಾಗರ ಅಣೆಕಟ್ಟೆ, ವಾಣಿವಿಲಾಸ ಸಾಗರ ಅಣೆಕಟ್ಟೆ, ಹಿರೇಭಾಸ್ಕರ ಅಣೆಕಟ್ಟು, ಮಾರ್ಕೋನಳ್ಳಿ ಅಣೆಕಟ್ಟು, ಭದ್ರಾವತಿ ಉಕ್ಕಿನ ಕಾರ್ಖಾನೆ, ಭಾರತೀಯ ವಿಜ್ಞಾನ ಮಂದಿರ, ಮೈಸೂರು ಬ್ಯಾಂಕ್, ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಮೆಡಿಕಲ್ ಕಾಲೇಜು, ಮೈಸೂರು ರೈಲ್ವೇ ಮುಂತಾದ ಅನೇಕ ಜನಪರ ಕೆಲಸಗಳನ್ನು ಕೈಗೆತ್ತಿಕೊಳ್ಳುತ್ತಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ವಿಶಾಲ ಹೃದಯವನ್ನು ಶ್ರೀ ಟಿ.ಎಸ್.ಗೋಪಾಲ್ ಅವರು ಈ ಪುಸ್ತಕದಲ್ಲಿ ಸೊಗಸಾಗಿ ಪರಿಚಯಮಾಡಿಕೊಟ್ಟಿದ್ದಾರೆ.
|
ಶ್ರೀ ಟಿ ಎಸ್ ಗೋಪಾಲ್ ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎ. ಹಾಗೂ ಎಂ.ಎ. ಪದವಿಗಳನ್ನು ಚಿನ್ನದ ಪದಕಗಳೊಂದಿಗೆ ಪಡೆದವರು. ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರು. ನಾಗರಹೊಳೆ ವನ್ಯಜೀವಿಸಂರಕ್ಷಣಾ ಶಿಕ್ಷಣ ಯೋಜನೆಯಲ್ಲಿ ಸಕ್ರಿಯ ಪಾತ್ರವಹಿಸಿದ್ದರು. ಇವರು ಬರೆದ ‘ನವಕರ್ನಾಟಕ ಕನ್ನಡ ಕಲಿಕೆ’ ಮಾಲೆಯ ಹತ್ತು ಪುಸ್ತಕಗಳು ನವಕರ್ನಾಟಕದಿಂದ ಪ್ರಕಟವಾಗಿವೆ.
|
|
| |
|
|
|
|
|
|
|
|
|