|
|

|  |
Dispatched within 7 Business Days |
 | FREE Home Delivery (For purchase of Rs 399/- and above) |
| |
- ವಿವರಗಳು
- ಪುಸ್ತಕದ ಬಗ್ಗೆ
- ಲೇಖಕರ ಬಗ್ಗೆ
ವಿದ್ಯಾರ್ಥಿಗಳು ತಮ್ಮ ಬುದ್ಧಿಶಕ್ತಿಗೆ ತಕ್ಕಂತೆ, ಲಭ್ಯವಿರುವ ಸಂಪನ್ಮೂಲಗಳನ್ನು, ಅವಕಾಶಗಳನು ಗರಿಷ್ಠಮಟ್ಟದಲ್ಲಿ ಬಳಸಿಕೊಂಡು, ಪರೀಕ್ಷೆಗಳಲ್ಲಿ ಉತ್ತಮ ಮಟ್ಟವನ್ನು ತೋರಬೇಕಾದರೆ ಅವರ ಮನಸ್ಸು ನೆಮ್ಮದಿಯಿಂದಿರಬೇಕು. ಯಾವುದೇ ಸಮಸ್ಯೆ ಅವರನ್ನು ಬಾಧಿಸಲಾರಂಭಿಸಿದರೆ ಅವರ ಕಲಿಕೆ, ಪರೀಕ್ಷಾ ನಿರ್ವಹಣೆಗೆ ಅಡ್ಡಿಯಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳ ಮನೋ-ಸಾಮಾಜಿಕ ಸಮಸ್ಯೆಗಳ ಬಗ್ಗೆ ತಂದೆ ತಾಯಿಗಳು, ಶಿಕ್ಷಕರು ಹಾಗೂ ಸಂಬಂಧಪಟ್ಟವರು ತೀವ್ರ ಗಮನವನ್ನು ಹರಿಸಬೇಕು. ಇವುಗಳ ನಿವಾರಣೆಗೆ ಸಕ್ರಿಯವಾಗಿ ಪ್ರಯತ್ನ ಮಾಡಬೇಕು. ಸಮಸ್ಯೆ ತಂದೆ ತಾಯಿ - ಕುಟುಂಬದಲ್ಲಿರಬಹುದು, ಶಾಲಾ-ಕಾಲೇಜು ಶಿಕ್ಷಕ ಸಹಪಾಠಿಗಳಲ್ಲಿರಬಹುದು, ನೆರೆಹೊರೆ ಸಮಾಜದಲ್ಲಿರಬಹುದು ಅಥವಾ ವಿದ್ಯಾರ್ಥಿಯ ವ್ಯಕ್ತಿತ್ವ ಹಾಗೂ ಅಂತರಾಳದಲ್ಲೇ ಇರಬಹುದು. ಸಮಸ್ಯೆಯನ್ನು ಗುರುತಿಸಿ ಅದರ ಉಗಮ, ಬೆಳವಣಿಗೆ ಸ್ವರೂಪವನ್ನು ಅರ್ಥಮಾಡಿಕೊಂಡು, ಆನಂತರ ಪರಿಹಾರೋಪಾಯಗಳನ್ನು ಯೋಜಿಸಬೇಕಾಗುತ್ತದೆ. ಈ ದಿಸೆಯಲ್ಲಿ ಈ ಪುಸ್ತಕ ವಿದ್ಯಾರ್ಥಿಗಳಿಗೆ, ಪಾಲಕ-ಪೋಷಕರಿಗೆ, ಶಿಕ್ಷಕರಿಗೆ ನೆರವಾಗುತ್ತದೆ.
|
ಡಾ|| ಸಿ. ಆರ್. ಚಂದ್ರಶೇಖರ್ ಖ್ಯಾತ ಮನೋವೈದ್ಯರು, ಲೇಖಕರು ಮತ್ತು ಸಂವಹನಕಾರರು. ಇವರು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ 32 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಈಗ ನಿವೃತ್ತರು. `ವ್ಯಕ್ತಿ ವಿಕಸನ ಮಾಲೆ`ಯ ಸಂಪಾದಕರೂ ಆಗಿರುವ ಇವರ ಅರವತ್ತಕ್ಕೂ ಹೆಚ್ಚು ಪುಸ್ತಕಗಳನ್ನು ನವಕರ್ನಾಟಕ ಪ್ರಕಟಿಸಿದೆ. ಇಂಗ್ಲಿಷಿನಲ್ಲಿ ಮತ್ತು ಕನ್ನಡದಲ್ಲಿ ಒಟ್ಟು 180ಕ್ಕೂ ಹೆಚ್ಚಿನ ಕೃತಿಗಳನ್ನು ನೀಡಿದ್ದಾರೆ. ಇವರ ಸಾಧನೆಗೆ ಭಾರತ ಸರ್ಕಾರದಿಂದ ರಾಷ್ಟ್ರೀಯ ಪುರಸ್ಕಾರ, ಕರ್ನಾಟಕ ಸರ್ಕಾರದಿಂದ ಡಾ|| ಅನುಪಮಾ ನಿರಂಜನ ಪ್ರಶಸ್ತಿ ಹಾಗೂ ಪ್ರತಿಷ್ಠಿತ ಸಂಘ ಸಂಸ್ಥೆಗಳಿಂದ 50ಕ್ಕೂ ಹೆಚ್ಚಿನ ಪ್ರಶಸ್ತಿ-ಪುರಸ್ಕಾರಗಳು ಲಭಿಸಿವೆ.
|
|
| |
|
|
|
|
|
|
|
|
|